ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 19 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 6 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ನವೆಂಬರ್ 2026
ಗುರುವಾರ · ಪಂಚಾಶತ್ತಮದ ನಂತರದ 25ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Saint Paul the Confessor, Bishop of Constantinople († 350)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ. 14ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು. 15ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ. 16ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, 17ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ. 3:1ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ, 2ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ. 3ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು. 4ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು. 5ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
ಸುವಾರ್ತೆ
47ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ. 48ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. 49ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ 50ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. 52ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು. 53ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ, 54ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. 12:1ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 19 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು