ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 21 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ನವೆಂಬರ್ 2026
ಶನಿವಾರ · ಸಾಮಾನ್ಯ ಕಾಲದ 33ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 33ನೇ ವಾರದ ಶನಿವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಪೂಜ್ಯ ಕನ್ಯೆ ಮರಿಯಳ ಸಮರ್ಪಣೆ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
4ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ. 5ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು. 6ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. 7ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. 8ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು. 9ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ. 10ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು. 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. 12ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ. 2ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ. 9ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. 10ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
ಸುವಾರ್ತೆ
27ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ, 28“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ. 29ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. 30ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. 32ಕಡೆಯಲ್ಲಿ ಆ ಹೆಂಗಸೂ ಸತ್ತಳು. 33ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು. 34ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. 35ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. 36ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ. 37ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ. 38ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. 39ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು. 40ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು