Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 23 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ನವೆಂಬರ್ 2026

ಸೋಮವಾರ · ಸಾಮಾನ್ಯ ಕಾಲದ 34ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 34ನೇ ವಾರದ ಸೋಮವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಕ್ಲೆಮೆಂಟ್ I, ಪೋಪ್ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ

ಸಂತ ಕೊಲಂಬನ್, ಮಠಾಧಿಪತಿ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಪ್ರಕ 14:1–5

1ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು. 2ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು. 3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. 4ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು. 5ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.

ಪ್ರತಿವಚನ ಕೀರ್ತನೆ

ಕೀರ್ತ 24:1–6

1ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ

ಸುವಾರ್ತೆ

ಲೂಕ 21:1–4

1ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು. 2ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ, 3“ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. 4ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು