ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 24 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ನವೆಂಬರ್ 2026
ಮಂಗಳವಾರ · ಸಾಮಾನ್ಯ ಕಾಲದ 34ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 34ನೇ ವಾರದ ಮಂಗಳವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತ ಆಂಡ್ರ್ಯೂ ಡುಂಗ್-ಲಾಕ್, ಧರ್ಮಗುರು, ಮತ್ತು ಸಂಗಡಿಗರು, ಹುತಾತ್ಮರು · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
14ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು. 15ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು. 16ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. 17ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. 18ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು. 19ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು. 20ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.
ಪ್ರತಿವಚನ ಕೀರ್ತನೆ
10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 11ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. 12ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. 13ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
ಸುವಾರ್ತೆ
5ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ, 6ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು. 7ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು, 8ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ. 9ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. 10ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. 11ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
ಇಂದಿನ ಸಂತರು
- ಸಂತ ಆಂಡ್ರ್ಯೂ ಡುಂಗ್-ಲಾಕ್, ಧರ್ಮಗುರು, ಮತ್ತು ಸಂಗಡಿಗರು, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು