Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 24 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 11 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ನವೆಂಬರ್ 2026

ಮಂಗಳವಾರ · ಪಂಚಾಶತ್ತಮದ ನಂತರದ 26ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Great Martyr Menas of Egypt († 304)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ತಿಮೊ 1:8–14

8ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. 9ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, 10ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ. 11ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. 12ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; 14ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

ಸುವಾರ್ತೆ

ಲೂಕ 12:42–48

42ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು? 43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 45ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, 46ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. 47ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. 48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 24 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು