ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 25 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ನವೆಂಬರ್ 2026
ಬುಧವಾರ · ಸಾಮಾನ್ಯ ಕಾಲದ 34ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 34ನೇ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಅಲೆಕ್ಸಾಂಡ್ರಿಯಾದ ಸಂತ ಕ್ಯಾಥರೀನ್, ಕನ್ಯೆ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. 2ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು. 3ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. 4ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. 8ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. 9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
ಸುವಾರ್ತೆ
12ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. 14ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. 16ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
ಇಂದಿನ ಸಂತರು
- ಅಲೆಕ್ಸಾಂಡ್ರಿಯಾದ ಸಂತ ಕ್ಯಾಥರೀನ್, ಕನ್ಯೆ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು