ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 26 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ನವೆಂಬರ್ 2026
ಗುರುವಾರ · ಸಾಮಾನ್ಯ ಕಾಲದ 34ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 34ನೇ ವಾರದ ಗುರುವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು. 2ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು. 21ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ. 22ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು. 23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು. 19:1ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. 2ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ, 3ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು. 9ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.
ಪ್ರತಿವಚನ ಕೀರ್ತನೆ
1ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಸುವಾರ್ತೆ
20“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. 23ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು. 25“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. 26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. 27ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. 28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು