ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 26 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 13 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ನವೆಂಬರ್ 2026
ಗುರುವಾರ · ಪಂಚಾಶತ್ತಮದ ನಂತರದ 26ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Saint John Chrysostom, Archbishop of Constantinople († 407)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
ಜ್ಞಾನೋ 10 (ಆರಿಸಿದ ವಚನಗಳು)
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ
1“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ. 2ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. 3ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. 4ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. 5ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ. 6ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ. 7ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ, 8ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
ಪತ್ರಿಕೆ (ಸಂತ ಯೋಹಾನ ಕ್ರಿಸೊಸ್ತೊಮ್)
26ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. 8:1ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
ಸುವಾರ್ತೆ (ಸಂತ ಯೋಹಾನ ಕ್ರಿಸೊಸ್ತೊಮ್)
9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 26 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು