ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 27 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ನವೆಂಬರ್ 2026
ಶುಕ್ರವಾರ · ಸಾಮಾನ್ಯ ಕಾಲದ 34ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 34ನೇ ವಾರದ ಶುಕ್ರವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
1ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. 2ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. 3ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. 4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು. 11ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. 12ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. 13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. 14ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. 15ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. 21:1ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. 2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
ಪ್ರತಿವಚನ ಕೀರ್ತನೆ
2ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. 3ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! 4ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ 5ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ, 7ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
ಸುವಾರ್ತೆ
29ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ. 30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. 31ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. 32“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು