ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 30 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ನವೆಂಬರ್ 2026
ಸೋಮವಾರ · ಪಂಚಾಶತ್ತಮದ ನಂತರದ 27ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Saint Gregory the Wonderworker, Bishop of Neo-Cæsarea († c. 266-270)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ, 2ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು. 3ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 5ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. 6ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ. 7ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು. 8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ. 9ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ, 10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.
ಪತ್ರಿಕೆ (ಅದ್ಭುತಕಾರಿ ಸಂತ ಗ್ರೆಗೊರಿ)
7ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. 8ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು 9ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು, 10ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ. 11ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.
ಸುವಾರ್ತೆ
12ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು. 13ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, 14ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.” 15ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 30 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು