Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 1 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 18 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಡಿಸೆಂಬರ್ 2026

ಮಂಗಳವಾರ · ಪಂಚಾಶತ್ತಮದ ನಂತರದ 27ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Martyr Platon of Ancyra († 302 or 306)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ತಿಮೊ 5:11–21

11ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು. 12ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು. 13ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ. 14ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು. 15ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ. 16ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. 17ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. 18“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ. 19ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ. 20ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. 21ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.

ಸುವಾರ್ತೆ

ಲೂಕ 14:25–35

25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ, 26“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು. 28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? 29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು, 30‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು. 31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ? 32ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. 33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು. 34“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? 35ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 1 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು