ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 3 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಡಿಸೆಂಬರ್ 2026
ಗುರುವಾರ · ಆಗಮನ ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಮೊದಲನೆಯ ವಾರದ ಗುರುವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಸಂತ ಫ್ರಾನ್ಸಿಸ್ ಕ್ಸೇವಿಯರ್, ಧರ್ಮಗುರು · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ. 2ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ! 3ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ. 4ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ. 5ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ. 6ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.
ಪ್ರತಿವಚನ ಕೀರ್ತನೆ
ಕೀರ್ತ 118:1, 8–9, 19–21, 25–27
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 8ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 9ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 19ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. 20ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. 21ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. 25ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. 26ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. 27ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
ಸುವಾರ್ತೆ
21“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. 24“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು. 25ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ. 26ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು. 27ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
ಇಂದಿನ ಸಂತರು
- ಸಂತ ಫ್ರಾನ್ಸಿಸ್ ಕ್ಸೇವಿಯರ್, ಧರ್ಮಗುರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು