ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 3 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಡಿಸೆಂಬರ್ 2026
ಗುರುವಾರ · ಪಂಚಾಶತ್ತಮದ ನಂತರದ 27ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Forefeast of the Entry of the Theotokos
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
17ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. 18ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು. 20ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ. 21ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.
ಪತ್ರಿಕೆ (ಶುಕ್ರವಾರಕ್ಕೆ)
1ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು, 2ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ. 8ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. 9ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, 10ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. 11ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. 12ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ. 13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. 14ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ. 15ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ. 16ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ, 17ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು. 18ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
ಸುವಾರ್ತೆ
1ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, 2ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು. 3ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. 4ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು, 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು, 6ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು. 8ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. 9“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
ಸುವಾರ್ತೆ (ಶುಕ್ರವಾರಕ್ಕೆ)
15ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ. 16“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. 17ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ. 18“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ. 17:1ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? 2ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು. 3ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. 4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 3 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು