ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 4 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಡಿಸೆಂಬರ್ 2026
ಶುಕ್ರವಾರ · ಆಗಮನ ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಮೊದಲನೆಯ ವಾರದ ಶುಕ್ರವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ
ದಮಸ್ಕದ ಸಂತ ಯೋಹಾನ, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
17ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು. 18ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು. 19ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು. 20ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು. 21ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು. 22ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ. 23ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು. 24ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಸುವಾರ್ತೆ
27ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು. 28ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು. 29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು. 30ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು. 31ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
ಇಂದಿನ ಸಂತರು
- ದಮಸ್ಕದ ಸಂತ ಯೋಹಾನ, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು