Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 4 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 21 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಡಿಸೆಂಬರ್ 2026

ಶುಕ್ರವಾರ · ಪಂಚಾಶತ್ತಮದ ನಂತರದ 27ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Entry into the Temple of our Most Holy Lady Theotokos and Ever-Virgin Mary

ಕ್ರಿಸ್ತ ಜನನದ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ವಿಮೋ 40:1–5, 9–10, 16, 34–35

1ಆಗ ಯೆಹೋವನು ಮೋಶೆಗೆ, 2“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು. 3ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು. 4ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು. 5ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು. 9“ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು. 10ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು. 16ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು. 34ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು. 35ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಸಂಧ್ಯಾ ಪ್ರಾರ್ಥನೆ: ವಾಚನ

1 ಅರಸು 8:1, 3–7, 9–11

1ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು. 3ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು. 4ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು. 5ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು. 6ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು. 7ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. 9ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು. 10ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು. 11ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.

ಸಂಧ್ಯಾ ಪ್ರಾರ್ಥನೆ: ವಾಚನ

ಯೆಹೆ 43:27–44:4

27ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ. 44:1ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು. 2ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು. 3ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು. 4ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಲೂಕ 1:39–49, 56

39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. 42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? 44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.” 46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.

ಪತ್ರಿಕೆ (ದೇವಾಲಯ ಪ್ರವೇಶ)

ಇಬ್ರಿ 9:1–7

1ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು. 2ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು. 3ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು. 4ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು. 5ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ. 6ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು. 7ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.

ಸುವಾರ್ತೆ (ದೇವಾಲಯ ಪ್ರವೇಶ)

ಲೂಕ 10:38–42; 11:27–28

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 4 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು