ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 7 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಡಿಸೆಂಬರ್ 2026
ಸೋಮವಾರ · ಪಂಚಾಶತ್ತಮದ ನಂತರದ 28ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Afterfeast of the Entry of the Theotokos
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ. 21ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು. 22ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. 23ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. 24ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ 25ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು. 26ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.
ಸುವಾರ್ತೆ
20ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. 21‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು. 22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. 23ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. 24ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು. 25ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 7 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು