ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 9 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ಡಿಸೆಂಬರ್ 2026
ಬುಧವಾರ · ಆಗಮನ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಎರಡನೆಯ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ
ಸಂತ ಹುವಾನ್ ಡಿಯೆಗೊ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
25ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ. 26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು. 27ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ? 28ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ. 29ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. 30ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. 31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. 2ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. 3ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ, 4ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. 8ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು. 10ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
ಸುವಾರ್ತೆ
28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಇಂದಿನ ಸಂತರು
- ಸಂತ ಹುವಾನ್ ಡಿಯೆಗೊ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು