ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 10 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 27 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಡಿಸೆಂಬರ್ 2026
ಗುರುವಾರ · ಪಂಚಾಶತ್ತಮದ ನಂತರದ 28ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Icons of the Mother of God: “Znamenie” of Novgorod and “Znamenie”, the Kursk-Root
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
5ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. 6ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. 7ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, 8ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು, 9ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. 10ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ. 11ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. 12“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ. 13ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ, 14ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. 15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. 16ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ. 2:1ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
ಸುವಾರ್ತೆ
31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. 32ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, 33ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. 34ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 10 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು