Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 11 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಡಿಸೆಂಬರ್ 2026

ಶುಕ್ರವಾರ · ಆಗಮನ ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಆಗಮನ ಕಾಲದ ಎರಡನೆಯ ವಾರದ ಶುಕ್ರವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ಸಂತ ದಮಾಸಸ್ I, ಪೋಪ್ · ಐಚ್ಛಿಕ ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 48:17–19

17ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು. 18ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು. 19ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಪ್ರತಿವಚನ ಕೀರ್ತನೆ

ಕೀರ್ತ 1:1–4, 6

1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಸುವಾರ್ತೆ

ಮತ್ತಾ 11:16–19

16ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, 17‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ. 18ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ. 19ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು