ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 12 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 29 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಡಿಸೆಂಬರ್ 2026
ಶನಿವಾರ · ಪಂಚಾಶತ್ತಮದ ನಂತರದ 28ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Martyr Paramon and 370 Martyrs in Bithynia († 250)
ಕ್ರಿಸ್ತ ಜನನದ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
16ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. 17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. 18ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ, 19ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. 20ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ 21ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. 22ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. 23ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.
ಸುವಾರ್ತೆ
19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. 20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. 21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 12 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು