ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 13 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಡಿಸೆಂಬರ್ 2026
ಭಾನುವಾರ · ಆಗಮನ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಮೂರನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಗುಲಾಬಿ
ದಿನದ ವಾಚನಗಳು
ಮೊದಲನೆಯ ವಾಚನ
1ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, 2ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, 10ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ. 11ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.
ಪ್ರತಿವಚನ ಕೀರ್ತನೆ
47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 50ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು. 53ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. 54ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.
ಎರಡನೆಯ ವಾಚನ
16ಯಾವಾಗಲೂ ಸಂತೋಷಿಸಿರಿ, 17ಎಡೆಬಿಡದೆ ಪ್ರಾರ್ಥನೆಮಾಡಿರಿ, 18ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ. 19ಪವಿತ್ರಾತ್ಮನನ್ನು ನಂದಿಸಬೇಡಿ, 20ಪ್ರವಾದನೆಗಳನ್ನು ಹಿನೈಸಬೇಡಿರಿ. 21ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. 22ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ. 23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ. 24ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
ಸುವಾರ್ತೆ
6ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 19ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ, 20ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು. 21ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು. 22ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು. 23ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು. 24ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು. 25ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು. 26ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ. 27ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು. 28ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.
ಇಂದಿನ ಸಂತರು
- ಸಂತ ಲೂಸಿ, ಕನ್ಯೆ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು