Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 14 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 1 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಡಿಸೆಂಬರ್ 2026

ಸೋಮವಾರ · ಪಂಚಾಶತ್ತಮದ ನಂತರದ 29ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Prophet Naum (7th C BC)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 3:5–11, 17–19

5ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ. 6ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ. 7ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, 8ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. 9ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. 10ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. 11ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’” 17ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು. 18ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ? 19ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.

ಸುವಾರ್ತೆ

ಲೂಕ 19:37–44

37ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ, 38“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು. 39ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ, 40ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು. 41ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ, 42“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ. 43ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 14 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು