Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 15 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಡಿಸೆಂಬರ್ 2026

ಮಂಗಳವಾರ · ಪಂಚಾಶತ್ತಮದ ನಂತರದ 29ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Prophet Habakuk (7th C BC)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 4:1–13

1ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ. 2ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. 3ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ. 4ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ. 5“ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ. 6ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು. 7ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ. 8ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ. 9ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು. 10ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. 11ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ. 12ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. 13ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.

ಸುವಾರ್ತೆ

ಲೂಕ 19:45–48

45ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ, 46“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು. 47ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. 48ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 15 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು