Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 16 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 3 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಡಿಸೆಂಬರ್ 2026

ಬುಧವಾರ · ಪಂಚಾಶತ್ತಮದ ನಂತರದ 29ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Prophet Sophonius († 635-605 BC)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 5:11–6:8

11ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ. 12ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. 13ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ. 14ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ. 6:1ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. 3ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು. 4ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು, 5ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, 6ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ. 7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ. 8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.

ಸುವಾರ್ತೆ

ಲೂಕ 20:1–8

1ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು, 2“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು, 3ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ. 4ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು. 5ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು, 6ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, 7ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು. 8ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 16 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು