ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 17 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಡಿಸೆಂಬರ್ 2026
ಗುರುವಾರ · ಆಗಮನ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಡಿಸೆಂಬರ್ 17
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
1ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ. 2ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ. 8ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು. 9ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು? 10ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
ಪ್ರತಿವಚನ ಕೀರ್ತನೆ
1ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. 2ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. 3ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ. 4ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ. 7ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. 8ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. 17ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ಸುವಾರ್ತೆ
1ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ. 2ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು. 3ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು. 4ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು. 5ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು. 6ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು. 7ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು. 8ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು. 9ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು. 10ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು. 11ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು. 12ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು 13ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು. 14ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು. 15ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು. 16ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು. 17ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು