Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 19 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 6 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಡಿಸೆಂಬರ್ 2026

ಶನಿವಾರ · ಪಂಚಾಶತ್ತಮದ ನಂತರದ 29ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Saint Nicholas the Wonderworker, Archbishop of Myra in Lycia († c. 345)

ಕ್ರಿಸ್ತ ಜನನದ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10; ಜ್ಞಾನೋ 3; ಜ್ಞಾನೋ 8 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10:31–11:12

31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು. 32ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ. 11:1ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ. 2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ. 3ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ. 4ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ. 5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು. 6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು. 7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು. 8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು. 9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು. 10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು. 12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಯೋಹಾ 10:9–16

9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ಪತ್ರಿಕೆ (ಸಂತ ನಿಕೋಲಸ್)

ಇಬ್ರಿ 13:17–21

17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ. 19ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ. 20ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಸುವಾರ್ತೆ (ಸಂತ ನಿಕೋಲಸ್)

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 19 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು