ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 20 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಡಿಸೆಂಬರ್ 2026
ಭಾನುವಾರ · ಆಗಮನ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ನಾಲ್ಕನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
1ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು. 2ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು. 3ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು. 4ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು. 5ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ‘ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ? 8ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು. 9ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು. 10ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು. 11ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. 12ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು. 14ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು. 15ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ 16ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು
ಪ್ರತಿವಚನ ಕೀರ್ತನೆ
1ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು. 2ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ. 3ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು, 4‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ 26ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು. 28ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
ಎರಡನೆಯ ವಾಚನ
25ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, 27ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.
ಸುವಾರ್ತೆ
26ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು; 27ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು. 28ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. 29ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು. 30ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. 31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. 32ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. 33ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. 34ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. 35ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು. 36ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು. 37ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು. 38ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು