Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 20 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 7 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಡಿಸೆಂಬರ್ 2026

ಭಾನುವಾರ · ಸ್ವರ 4

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 29ನೇ ಭಾನುವಾರ

ಕ್ರಿಸ್ತ ಜನನದ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಏಳನೆಯ ಸುವಾರ್ತೆ

ಯೋಹಾ 20:1–10

1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು. 2ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು 3ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. 4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು. 5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ. 6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ 7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. 8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. 9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ. 10ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.

ಪತ್ರಿಕೆ

ಕೊಲೊ 3:12–16

12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. 15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. 16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಸುವಾರ್ತೆ

ಲೂಕ 17:12–19

12ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, 13“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು. 14ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. 15ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, 16ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು. 17ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? 18ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ, 19ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 20 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು