Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 21 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಡಿಸೆಂಬರ್ 2026

ಸೋಮವಾರ · ಆಗಮನ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಡಿಸೆಂಬರ್ 21

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ಸಂತ ಪೀಟರ್ ಕನಿಸಿಯಸ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಸ್ಮರಣೋಲ್ಲೇಖ

ದಿನದ ವಾಚನಗಳು

ಮೊದಲನೆಯ ವಾಚನ

ಪ.ಗೀ 2:8–14

ಅಥವಾ: ಚೆಫ 3:14–17

8ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ; 9ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ! 10ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ! 11ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು; 12ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ; 13ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ! 14ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”

ಪ್ರತಿವಚನ ಕೀರ್ತನೆ

ಕೀರ್ತ 33:2–3, 11–12, 20–21

2ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 3ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. 11ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. 12ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. 20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 21ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.

ಸುವಾರ್ತೆ

ಲೂಕ 1:39–45

39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. 42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? 44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು