Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 23 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಡಿಸೆಂಬರ್ 2026

ಬುಧವಾರ · ಆಗಮನ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಡಿಸೆಂಬರ್ 23

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ಕಾಂಟಿಯ ಸಂತ ಜಾನ್, ಧರ್ಮಗುರು · ಸ್ಮರಣೋಲ್ಲೇಖ

ದಿನದ ವಾಚನಗಳು

ಮೊದಲನೆಯ ವಾಚನ

ಮಲಾ 3:1–4; 4:5–6

1“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 2ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ. 3ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು. 4ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು. 4:5ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು; 6ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”

ಪ್ರತಿವಚನ ಕೀರ್ತನೆ

ಕೀರ್ತ 25:4–5, 8–10, 14

4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. 10ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. 14ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಸುವಾರ್ತೆ

ಲೂಕ 1:57–66

57ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು. 58ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು. 59ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು. 60ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು, 61ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು. 62ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು. 63ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು. 64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು. 65ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು. 66ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು