Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 23 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 10 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಡಿಸೆಂಬರ್ 2026

ಬುಧವಾರ · ಪಂಚಾಶತ್ತಮದ ನಂತರದ 30ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Martyrs Minos, Hermogenes, and Eugraphos of Alexandria († c. 313)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 10:1–18

1ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು. 2ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ. 3ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು, 4ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. 5ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, 6ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. 7ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು. 8ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ. 9ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. 10ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. 11ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು. 12ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. 14ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ. 15ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ, 16“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು, 17“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. 18ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.

ಸುವಾರ್ತೆ

ಲೂಕ 21:5–7, 10–11, 20–24

5ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ, 6ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು. 7ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು, 10ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. 11ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು. 20“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. 23ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 23 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು