Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 24 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ಡಿಸೆಂಬರ್ 2026

ಗುರುವಾರ · ಆಗಮನ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಡಿಸೆಂಬರ್ 24

ವಾರದ ದಿನ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

2 ಸಮು 7:1–5, 8–12, 16

1ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು. 2ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು. 3ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು. 4ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು. 5ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ‘ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ? 8ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು. 9ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು. 10ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು. 11ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. 12ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು. 16ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು

ಪ್ರತಿವಚನ ಕೀರ್ತನೆ

ಕೀರ್ತ 89:1–4, 26, 28

1ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು. 2ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ. 3ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು, 4‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ 26ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು. 28ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.

ಸುವಾರ್ತೆ

ಲೂಕ 1:67–79

67ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ, 68“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; 69ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ. 70ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, 71ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ. 72ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ. 74ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ. 76ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ, 77ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ, 79ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು