ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 24 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 11 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಡಿಸೆಂಬರ್ 2026
ಗುರುವಾರ · ಪಂಚಾಶತ್ತಮದ ನಂತರದ 30ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Venerable Daniel the “Stylite” [Pillar-Dweller] of Constantinople († 489-490)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
35ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. 36ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. 37“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. 38ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.” 39ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ. 11:1ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ. 2ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು. 3ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. 4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ. 5ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು. 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು. 7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
ಸುವಾರ್ತೆ
28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. 29ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ. 30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. 31ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. 32“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 24 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು