Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 25 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 12 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಡಿಸೆಂಬರ್ 2026

ಶುಕ್ರವಾರ · ಪಂಚಾಶತ್ತಮದ ನಂತರದ 30ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Saint Spyridon the Wonderworker, Bishop of Tremithus († c. 348)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 11:8, 11–16

8ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. 11ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು. 12ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು. 13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು. 14ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ. 15ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು. 16ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಸುವಾರ್ತೆ

ಲೂಕ 21:37–22:8

37ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು. 38ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು. 22:1ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ, 2ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು. 3ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು, 4ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು. 5ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು, 6ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು. 7ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ, 8ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 25 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು