ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 26 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಡಿಸೆಂಬರ್ 2026
ಶನಿವಾರ · ಕ್ರಿಸ್ಮಸ್ ಕಾಲ
ಹಬ್ಬಗಳು ಮತ್ತು ಸಂತರು
ಸಂತ ಸ್ತೆಫನ, ಪ್ರಥಮ ಹುತಾತ್ಮ
ಹಬ್ಬ · ಆರಾಧನಾ ಬಣ್ಣ: ಕೆಂಪು
ದಿನದ ವಾಚನಗಳು
ಮೊದಲನೆಯ ವಾಚನ
8ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು. 9ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು. 10ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು. 7:54ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು. 55ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು; 56“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು. 57ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು, 58ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು. 59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ, 60ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.
ಪ್ರತಿವಚನ ಕೀರ್ತನೆ
2ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು. 3ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು. 5ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ. 7ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. 15ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು. 16ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು.
ಸುವಾರ್ತೆ
17ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು. 18ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. 19ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. 20ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು. 21ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. 22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
ಇಂದಿನ ಸಂತರು
- ಸಂತ ಸ್ತೆಫನ, ಪ್ರಥಮ ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು