ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 26 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 13 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಡಿಸೆಂಬರ್ 2026
ಶನಿವಾರ · ಪಂಚಾಶತ್ತಮದ ನಂತರದ 30ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Martyrs Eustratios, Auxentios, Eugene, Mardarius and Orestes at Sebaste († c. 284-305)
ಕ್ರಿಸ್ತ ಜನನದ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. 2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. 3ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. 4ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 5ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. 6ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. 7ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. 8ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
ಸುವಾರ್ತೆ
18ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ? 19ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು. 20ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? 21ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು. 22ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು. 23ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, 24ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ. 25ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು 26ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. 27ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು. 28ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು. 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 26 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು