ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 28 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 15 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಡಿಸೆಂಬರ್ 2026
ಸೋಮವಾರ · ಪಂಚಾಶತ್ತಮದ ನಂತರದ 31ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Hieromartyr Eleutherius, Bishop of Illyria, and his mother Martyr Anthea and Martyr Corivus the Eparch (2nd C)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
17ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು. 19ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು. 20ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು. 21ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. 22ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು. 23ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. 27ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು. 28ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು. 29ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು. 30ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. 31ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
ಸುವಾರ್ತೆ
11ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು. 12ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು. 13ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು. 14ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ. 15ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು. 16ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು. 17ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ? 18ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ? 19ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು. 20“ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು. 21ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 28 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು