ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2026 › 31 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 18 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಡಿಸೆಂಬರ್ 2026
ಗುರುವಾರ · ಪಂಚಾಶತ್ತಮದ ನಂತರದ 31ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Martyr Sebastian at Rome with his companions: Martyrs Nicostratus, his wife Zoe, Castorius, Tranquillinus the Presbyter and his sons the Deacons Marcellinus and Mark, Claudius, his son Symphorian and brother Victorinus, Tiburtius and Castulus († c. 287)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
19ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. 20ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 21ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. 22ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. 23ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. 24ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. 25ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು. 26ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ. 27ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
ಸುವಾರ್ತೆ
10ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 11ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು. 12ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ? 13ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು. 14ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು. 15ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು. 16ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 31 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು