ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 1 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಜನವರಿ 2027
ಶುಕ್ರವಾರ · ಕ್ರಿಸ್ಮಸ್ ಕಾಲ
ಹಬ್ಬಗಳು ಮತ್ತು ಸಂತರು
ಪವಿತ್ರ ದೇವಮಾತೆ ಮರಿಯ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
22ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 23“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು, 24ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; 25ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; 26ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ. 27ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ 2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ 5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
ಎರಡನೆಯ ವಾಚನ
4ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು. 6ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. 7ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.
ಸುವಾರ್ತೆ
16ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. 17ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು. 18ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. 19ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು. 20ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. 21ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು