ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 1 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 19 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಜನವರಿ 2027
ಶುಕ್ರವಾರ · ಪಂಚಾಶತ್ತಮದ ನಂತರದ 31ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Martyr Boniface at Tarsus in Cilicia and the Righteous Aglae (Aglaida) of Rome († 290)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. 2ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, 3ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, 4ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? 5ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? 6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? 7ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ? 8ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ. 9ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ. 10ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ. 11ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ. 12ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ. 13ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
ಸುವಾರ್ತೆ
33ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು. 34ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು. 35ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ, 36ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, 37“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು. 38ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು. 39ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ. 40ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ. 41ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 1 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು