ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 2 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಜನವರಿ 2027
ಶನಿವಾರ · ಪಂಚಾಶತ್ತಮದ ನಂತರದ 31ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
ಕ್ರಿಸ್ತ ಜನನಕ್ಕೆ ಮುಂಚಿನ ಶನಿವಾರ
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
3ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. 4ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ. 5ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. 6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
ಪತ್ರಿಕೆ (ಕ್ರಿಸ್ತ ಜನನಕ್ಕೆ ಮುಂಚಿನ ಶನಿವಾರ)
8ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು. 9ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು. 10ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ. 11ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ. 12ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
ಸುವಾರ್ತೆ
1ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು. 2ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, 3“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. 4ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ, 5“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು. 6ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು. 7ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. 8ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು 9ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ. 10ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. 11ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
ಸುವಾರ್ತೆ (ಕ್ರಿಸ್ತ ಜನನಕ್ಕೆ ಮುಂಚಿನ ಶನಿವಾರ)
18ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ? 19ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು. 20ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? 21ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು. 22ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು. 23ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, 24ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ. 25ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು 26ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. 27ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು. 28ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು. 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 2 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು