Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 3 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಜನವರಿ 2027

ಭಾನುವಾರ · ಕ್ರಿಸ್ಮಸ್ ಕಾಲ

ಹಬ್ಬಗಳು ಮತ್ತು ಸಂತರು

ಕ್ರಿಸ್ಮಸ್ ನಂತರದ ಎರಡನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಬಿಳಿ

ಯೇಸುವಿನ ಅತಿಪವಿತ್ರ ನಾಮ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 147:12–15, 19–20

12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು. 13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. 14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ. 15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ. 19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ. 20ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!

ಎರಡನೆಯ ವಾಚನ

ಎಫೆ 1:3–6, 15–18

3ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. 4ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು. 5ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. 6ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು. 15ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ, 16ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. 17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. 18ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,

ಸುವಾರ್ತೆ

ಯೋಹಾ 1:1–18

1ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. 6ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 9ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. 14ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು. 15ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. 16ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. 17ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. 18ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು