ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 4 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಜನವರಿ 2027
ಸೋಮವಾರ · ಕ್ರಿಸ್ಮಸ್ ಕಾಲ
ಹಬ್ಬಗಳು ಮತ್ತು ಸಂತರು
ಜನವರಿ 4
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
7ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. 8ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. 9ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. 10ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. 8ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. 9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
ಸುವಾರ್ತೆ
35ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು, 36ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು. 37ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. 38ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು. 39ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು. 40ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು. 41ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ, 42ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು