ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 5 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 23 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಜನವರಿ 2027
ಮಂಗಳವಾರ · ಪಂಚಾಶತ್ತಮದ ನಂತರದ 32ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Forefeast of the Nativity
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ. 2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ. 3ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ. 4ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ. 5ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. 6ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. 7ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು. 8ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ. 9ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. 10ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
ಸುವಾರ್ತೆ
2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು. 3ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು. 4ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. 5ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. 6ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. 7ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. 8ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. 9ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು. 10ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು. 11ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; 12ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 5 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು