ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 6 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಜನವರಿ 2027
ಬುಧವಾರ · ಪಂಚಾಶತ್ತಮದ ನಂತರದ 32ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
ಕ್ರಿಸ್ತ ಜನನದ ಮುನ್ನಾದಿನ
ಕ್ರಿಸ್ತ ಜನನದ ಉಪವಾಸ · ಕಟ್ಟುನಿಟ್ಟಿನ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಮೊದಲನೆಯ ತಾಸು: ಪ್ರವಾದನೆ
2ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು. 3ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು 4ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
ಮೊದಲನೆಯ ತಾಸು: ಪತ್ರಿಕೆ
1ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. 2ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. 3ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 4ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. 5ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” 6ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. 7ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ. 8ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. 9ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. 10“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, 11ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
ಮೊದಲನೆಯ ತಾಸು: ಸುವಾರ್ತೆ
18ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. 20ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. 22ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, 23“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” 24ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. 25ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
ಮೂರನೆಯ ತಾಸು: ಪ್ರವಾದನೆ
ಈ ಅನುವಾದದಲ್ಲಿ ಇಲ್ಲ
ಮೂರನೆಯ ತಾಸು: ಪತ್ರಿಕೆ
23ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. 24ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು. 25ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ. 26ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. 27ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. 29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಮೂರನೆಯ ತಾಸು: ಸುವಾರ್ತೆ
1ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. 2ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. 3ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. 4ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು. 6ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. 8ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ, 9ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. 10ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. 11ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. 12ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು. 13ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. 15ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು, 16ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. 17ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು. 18ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. 19ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು. 20ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
ಆರನೆಯ ತಾಸು: ಪ್ರವಾದನೆ
10ಮತ್ತೆ ಯೆಹೋವನು ಆಹಾಜನಿಗೆ, 11“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. 12ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. 13ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ? 14ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. 15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು. 16“ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು. 8:1ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ. 2ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು. 3ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು. 4ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು. 9ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. 10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
ಆರನೆಯ ತಾಸು: ಪತ್ರಿಕೆ
10“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, 11ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ. 13ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? 14ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ? 2:1ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. 2ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. 3ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
ಆರನೆಯ ತಾಸು: ಸುವಾರ್ತೆ
1ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು, 2“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು. 3ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು. 4ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು. 5ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ, 6“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು. 7ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು, 8“ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು. 9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. 10ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು. 11ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. 12ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
9ನೇ ತಾಸು: ಪ್ರವಾದನೆ
6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. 7ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
9ನೇ ತಾಸು: ಪತ್ರಿಕೆ
11ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ. 12“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ, 13“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ. 14ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, 15ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು. 16ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ. 17ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು. 18ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
9ನೇ ತಾಸು: ಸುವಾರ್ತೆ
13ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು. 14ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು. 15ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು. 16ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. 17ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ, 18“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ. 19ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, 20“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು. 21ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು. 22ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು. 23ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
ಸಂಧ್ಯಾ ಪ್ರಾರ್ಥನೆ: ವಾಚನ
1ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. 2ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. 3ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. 4ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. 5ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. 6ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. 7ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. 8ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. 9ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. 10ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. 11ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. 12ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು 13ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
ಸಂಧ್ಯಾ ಪ್ರಾರ್ಥನೆ: ವಾಚನ
2ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ, 3ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು. 5ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ. 6ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ. 7ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು. 8ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು. 9ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು. 17ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು. 18ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
ಸಂಧ್ಯಾ ಪ್ರಾರ್ಥನೆ: ವಾಚನ
6ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು. 7ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು. 5:2ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು. 3ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು 4ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
ಸಂಧ್ಯಾ ಪ್ರಾರ್ಥನೆ: ವಾಚನ
1ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. 2ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು. 3ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ. 4ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು. 5ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ. 6ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು. 7ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು. 8ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು. 9ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು. 10ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
31“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು. 32ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ, 33ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು. 34“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು. 35ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. 36“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. 44“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು. 45ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
ಸಂಧ್ಯಾ ಪ್ರಾರ್ಥನೆ: ವಾಚನ
6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. 7ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಸಂಧ್ಯಾ ಪ್ರಾರ್ಥನೆ: ವಾಚನ
10ಮತ್ತೆ ಯೆಹೋವನು ಆಹಾಜನಿಗೆ, 11“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. 12ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. 13ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ? 14ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. 15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು. 16“ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು. 8:1ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ. 2ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು. 3ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು. 4ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು. 9ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. 10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
ಪತ್ರಿಕೆ (ಕ್ರಿಸ್ತ ಜನನದ ಮುನ್ನಾದಿನ)
1ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. 2ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. 3ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 4ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. 5ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” 6ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. 7ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ. 8ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. 9ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. 10“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, 11ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
ಸುವಾರ್ತೆ (ಕ್ರಿಸ್ತ ಜನನದ ಮುನ್ನಾದಿನ)
1ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. 2ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. 3ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. 4ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು. 6ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. 8ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ, 9ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. 10ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. 11ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. 12ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು. 13ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. 15ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು, 16ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. 17ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು. 18ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. 19ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು. 20ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 6 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು