ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 8 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 26 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ಜನವರಿ 2027
ಶುಕ್ರವಾರ · ಪಂಚಾಶತ್ತಮದ ನಂತರದ 32ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Afterfeast of the Nativity of Christ
ಕ್ರಿಸ್ಮಸ್ ಕಾಲ (ಸ್ವ್ಯಾತ್ಕಿ)
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ದೇವಮಾತೆ)
11ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ. 12“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ, 13“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ. 14ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, 15ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು. 16ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ. 17ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು. 18ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
ಸುವಾರ್ತೆ (ದೇವಮಾತೆ)
13ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು. 14ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು. 15ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು. 16ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. 17ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ, 18“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ. 19ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, 20“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು. 21ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು. 22ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು. 23ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 8 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು