Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 11 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಜನವರಿ 2027

ಸೋಮವಾರ · ಸಾಮಾನ್ಯ ಕಾಲದ ಮೊದಲನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಮೊದಲನೆಯ ವಾರದ ಸೋಮವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 1:1–6

1ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. 2ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. 3ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 4ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. 5ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” 6ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

ಪ್ರತಿವಚನ ಕೀರ್ತನೆ

ಕೀರ್ತ 97:1–2, 6–7, 9

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ. 6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 7ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. 9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.

ಸುವಾರ್ತೆ

ಮಾರ್ಕ 1:14–20

14ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು, 15“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.” 16ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು. 17ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು. 18ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 19ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. 20ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು