ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 12 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಜನವರಿ 2027
ಮಂಗಳವಾರ · ಪಂಚಾಶತ್ತಮದ ನಂತರದ 33ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Afterfeast of the Nativity of Our Lord
ಕ್ರಿಸ್ಮಸ್ ಕಾಲ (ಸ್ವ್ಯಾತ್ಕಿ)
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
16ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. 17ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು. 4:1ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, 2ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. 3ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. 4ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
ಸುವಾರ್ತೆ
11ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು. 12ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು. 13ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. 14ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. 15ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು; 16ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. 17ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು. 18ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. 19ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. 20ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. 21ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ 22ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ. 23ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 12 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು