Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 13 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 31 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಜನವರಿ 2027

ಬುಧವಾರ · ಪಂಚಾಶತ್ತಮದ ನಂತರದ 33ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Apodosis of the Nativity of Christ

ಕ್ರಿಸ್ಮಸ್ ಕಾಲ (ಸ್ವ್ಯಾತ್ಕಿ)

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ತಿಮೊ 4:9–22

9ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು, 10ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. 11ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ. 12ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. 14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು. 15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. 16ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ. 17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. 18ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. 19ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು. 20ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು. 21ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. 22ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.

ಸುವಾರ್ತೆ

ಮಾರ್ಕ 11:23–26

23ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. 24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. 25ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು. 26ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 31 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 13 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು