ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 14 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಜನವರಿ 2027
ಗುರುವಾರ · ಸಾಮಾನ್ಯ ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಮೊದಲನೆಯ ವಾರದ ಗುರುವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
7ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, 8ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. 9ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. 10ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. 11ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’” 12ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. 13ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. 14ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
ಪ್ರತಿವಚನ ಕೀರ್ತನೆ
6ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ. 7ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. 8ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. 9ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. 10ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು. 11ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.
ಸುವಾರ್ತೆ
40ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. 41ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. 42ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು. 43ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು; 44ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು. 45ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು